ರಾಜ್ಯದಲ್ಲಿ ಜು.5ರಿಂದ 3.0 ಅನ್‌ಲಾಕ್ ಜಾರಿ: ಮತ್ತಷ್ಟು ಸಡಿಲಿಕೆ ಮಾಡಿ ಸರ್ಕಾರ ಆದೇಶ

ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್ ಕರ್ಪ್ಯೂ ಇರುವುದಿಲ್ಲ. ಜು.5 ರಿಂದ ಶಾಪಿಂಗ್ ಮಾಲ್ ತೆರೆಯಲು ಅನುಮತಿ. ಶಾಲೆ, ಕಾಲೇಜು ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯಲು ಮುಂದಿನ ದಿನಗಳಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಬಾರ್‍ಗೆ ತೆರೆಯಲು ಅನುಮತಿ. ಚಿತ್ರಮಂದಿರ ತೆರೆಯಲು ಅವಕಾಶ ಇಲ್ಲ. ಸರ್ಕಾರಿ ಕಛೇರಿಗಳಿಗೆ ವಾಣಿಜ್ಯ ಚಟುವಟಿಕೆಗಳಿಗೆ 100 ರಷ್ಟು ಅವಕಾಶ. ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗ್ಗೆಯಿಂದ 5 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು 20 ಮಂದಿಗೆ ಮಾತ್ರ ಅವಕಾಶ.
ಸ್ವಿಮ್ಮಿಂಗ್ ಫೂಲ್‍ನಲ್ಲಿ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ. ದೇವಾಲಯಗಳಲ್ಲಿ ಭಕ್ತರಿಗಷ್ಟೇ ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆವರೆಗೆ ಅಂಗಡಿ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜುಲೈ 5ರಿಂದ ಜುಲೈ 19ರ ವರೆಗೆ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ.

Related Posts

Leave a Reply

Your email address will not be published.