ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು ಕಳೆದ ಮಂಗಳವಾರ ಅವರನ್ನು ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಿದೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿತ್ತು. ಅವರ ಜೊತೆಗೆ ಹಲವು ರಾಜ್ಯಗಳ ರಾಜ್ಯಪಾಲರನ್ನು ವರ್ಗಾಯಿಲಾಗಿದ್ದು, ಕೆಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಬಾಯಿ ವಾಲ ಉಪಸ್ಥಿತರಿದ್ದರು.

Related Posts

Leave a Reply

Your email address will not be published.