ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ
ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಕ್ಷೇತ್ರದ ವರದಿಯನ್ನು ಮಾಡುವ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಅವರಿಗೆ 2017ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಅಬುಧಾಬಿಯಲ್ಲಿ ವಿಶ್ವ ಕನ್ನಡ ಸಮ್ಮೇಳದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 2011ರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲೂ ಸದಸ್ಯರಾಗಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ.