ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ.
ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ ನವಿಲು ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಅಬ್ದುಲ್ ಜೀವನ್ಮರಣ ಹೋರಾಟದಲ್ಲಿದ್ದು ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಆಂಬುಲೆನ್ಸ್‌ಗೆ ಕರೆ ಮಾಡಿ, ಅರ್ಧ ಗಂಟೆಗೂ ಅಧಿಕ ಹೊತ್ತು ಕಾದಿದ್ದರಾದರೂ ಆಂಬುಲೆನ್ಸ್ ಬಾರದಿದ್ದರಿಂದ, ಸ್ಥಳೀಯ ಕಾರ್ತಿಕ್ ಎಂಬ ಯುವಕ ತನ್ನ ಖಾಸಗಿ ವಾಹನದಲ್ಲಿ ಸಾಗಿಸಿದ್ದರಾದರೂ ಅಷ್ಟರಲ್ಲೇ ಆ ಯುವಕ ಮೃತ ಪಟ್ಟಿದ್ದಾರೆ.