ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಹತ್ಯೆ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ಮೂರು ಜನ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ ಮಾತನಾಡಿದ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ಮೂರು ಜನ ರೈತರ ಹತ್ಯೆ ಮಾಡಲಾಗಿದೆ. ಅಲ್ಲದೇ ಪ್ರತಿಭಟನೆ ಮಾಡುವ ರೈತರನ್ನು ಹತ್ಯೆ ಮಾಡಿ ಎಂದು ಹರಿಯಾಣದ ಮುಖ್ಯಮಂತ್ರಿ ಹೇಳುತ್ತಾರೆ. ಇವರನ್ನಲ್ಲ ಅವರ ಸ್ಥಾನದಿಂದ ವಜಾಗೊಳಿಸಬೇಕು. ಕೇಂದ್ರ ಸರ್ಕಾರ ದೇಶವನ್ನ ಮಾರಲು ಹೊರಟಿದೆ ಆದಷ್ಟು ಬೇಗ ನಾವು ಒಂದಾಗಿ ನಮ್ಮ ದೇಶವನ್ನು ರಕ್ಷಿಸಬೇಕು ಎಂದು ಹೇಳಿದರು.
ಬಳಿಕ ಸಿಐಟಿಯುನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಉತ್ತರ ಪ್ರದೇಶದಲ್ಲಿ ರೈತರನ್ನು ಹತ್ಯೆ ಮಾಡಿದಂತ ಅಮಾನವೀಯ ಕೃತ್ಯ ನಡೆದಿದೆ. ಕಳೆದ 10 ತಿಂಗಳಿನಿಂದ ರೈತ ಹೋರಾಟ ನಡೆಯುತ್ತಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಲೆಕ್ಕಿಸದೆ ಅಂಬಾನಿ, ಅದಾನಿಗಳ ಜೇಬು ತುಂಬಿಸುತ್ತಿದೆ. ಇದು ಇಲ್ಲಿಗೆ ನಿಲ್ಲುವುದಿಲ್ಲಿ ರೈತನ ಕೊನೆಯ ಉಸಿರು ಇರುವ ವರಗೆ ಈ ಹೋರಾಟ ನಡೆಯುತ್ತದೆ ಎಂದು ಹೇಳಿದರು.
ಈ ಸಂದರ್ಭ ರೈತ ಮುಖಂಡರುಗಳಾದ ಕೃಷ್ಣಪ್ಪ ಸಾಲಿಯಾನ್, ಸನ್ನಿ ಡಿ’ಸೋಜಾ, ಶಾಹುಲ್ ಹಮೀದ್ ದಲಿತ ಮುಖಂಡರಾದ ಕೃಷ್ಣಪ್ಪ .ಪಿ. ಜನತಾದಳದ ಮುಖಂಡರಾದ ಸುಮತಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.