ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಂಚಿಕೆ, ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಿಂದ ನೀಡಲಾಗುವ ಆಹಾರ ಪೊಟ್ಟಗಳನ್ನು ವಿತರಿಸುವ ಕಾರ್ಯವನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುತ್ತಿದೆ.ಲಸಿಕೆ ವಿತರಣೆ ಸರಕಾರದ ಯೋಜನೆಯೂ ಅಲ್ಲಘಿ, ಚುನಾವಣೆಗೆ ಕೊಟ್ಟ ಭರವಸೆಯೂ ಅಲ್ಲ. ಆದರೆ ಬಿಜೆಪಿಯವರು ಲಸಿಕೆ ಕಾರ್ಯಕ್ರಮವನ್ನು ಹೈಜಾಕ್ ಮಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋ ಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ. ಶಾಸಕರುಗಳು ಹೇಳಿದ ಪ್ರದೇಶಕ್ಕೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಎಲ್ಲರಿಗೂ ಉಚಿತ ಲಸಿಕೆ ಅಂದ ಮೇಲೆ ಈ ತಾರತಮ್ಯ ಏಕೆ? ದಕ್ಷಿಣ ಕನ್ನಡ ಜಿಲ್ಲೆ ಪಾಸಿಟಿವ್ ಸಂಖ್ಯೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ. ಲಸಿಕಾ ಕಾರ್ಯಕ್ರಮ ಆಯಾಯ ಆರೋಗ್ಯ ಕೇಂದ್ರ, ಉಪಕೇಂದ್ರ, ಆಸ್ಪತ್ರೆಗಳಲ್ಲಿ ನಡೆಯಬೇಕೇ ಹೊರತು ಬಿಜೆಪಿ ಕಾರ್ಯಕರ್ತರ ಮನೆ ಸಮೀಪವಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ ಅವರು ಅಸಹಾಯಕತೆ ಪ್ರದರ್ಶಿಸುತ್ತಿದ್ದು, ಬಿಜೆಪಿಯ ಕೈಗೊಂಬೆಗಳಾಗಿದ್ದಾರೆ ಎಂದರು.ಸಾಂಕ್ರಾಮಿಕದಂತಹ ಈ ಸಂದರ್ಭದಲ್ಲಿ ಜನಸಾಮಾನ್ಯರ ಆರೋಗ್ಯದ ಹಕ್ಕು ಸರಕಾರದ ಜವಾಬ್ಧಾರಿ. ಆದರೆ ಲಸಿಕೆಯ ಸರ್ಟಿಫಿಕೇಟ್‌ನಲ್ಲೂ ಪ್ರಧಾನಿ ಮೋದಿ ಫೋಟೋ ಅಳವಡಿಸುವ ಸರಕಾರ ರೋಗದಿಂದ ಸತ್ತವರಿಗೆ ನೀಡುವ ಮರಣ ಪ್ರಮಾಣ ಪತ್ರದಲ್ಲೂ ಮೋದಿ ಫೋಟೋವನ್ನು ಹಾಕಲಿ ಎಂದು ವ್ಯಂಗ್ಯವಾಡಿದರು.


ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರಾದ ಶಾಹುಲ್ ಹಮೀದ್, ಅಬ್ಬಾಸ್ ಆಲಿ, ಲಾರೆನ್ಸ್ ಡಿಸೋಜಾ, ಸುಧೀರ್ ಟಿ.ಕೆ., ನೀರಜ್ ಪಾಲ್, ಅಪ್ಪಿ, ಸಬಿತಾ ಮಿಸ್ಕಿತ್, ಶೋಭಾ ಪಡೀಲ್, ಶಬೀರ್ ಎಸ್., ನಝೀರ್ ಬಜಾಲ್ ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.