ಲಾಕ್ ಡೌನ್ ನಿಯಮ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು
ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ ಹಾಕಿದ್ದಾರೆ. ಡಿ.ಸಿ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ಕೊರೋನಾ ನಿಂತ್ರಣಕ್ಕಾಗಿ ಮೂರು ವಿಚಕ್ಷಣ ದಳ ಕಾರ್ಯ ನಿರ್ವಹಿಸುತ್ತಿದೆ.
ತಹಶೀಲ್ದಾರ್ ಮತ್ತು ಪೌರಾಯುಕ್ತರು ಬೆಳಗ್ಗಿನಿಂದಲೇ ದರ್ಬೆ ಪೊಲೀಸ್ ಚೆಕ್ ಪಾಯಿಂಟ್ ಬಳಿ ವಾಹನ ತಪಾಸಣೆ ನಡೆಸಿದ್ದಾರೆ. ಲಾರಿ ಮತ್ತು ಹಲವು ವಾಹನಗಳನ್ನು ಜಫ್ತಿ ಮಾಡಿದ್ದಾರೆ. ಮುಂದಿನ ಒಂದು ವಾರ ನಿರಂತರ ವಾಹನ ತಪಾಸಣೆ ನಡೆಯಲಿದೆ ಎಂದು ತಹಶೀಲ್ದಾರ್ ರಮೇಶ್ ಬಾಬು ತಿಳಿಸಿದ್ದಾರೆ.