ಲಾಕ್ ಡೌನ್ ನಿಯಮ ಉಲ್ಲಂಘನೆ : 31 ವಾಹನಗಳ ಜಫ್ತಿ, 70 ಕೇಸು ದಾಖಲು

ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು ಮಾರ್ಕೆಟ್‍ನಲ್ಲಿ ಜನರು ದಿನದಿಂದ ದಿನಕ್ಕೆ ಹೆಚ್ಚು ಮುಗಿ ಬೀಳುತ್ತಿದ್ದರು. ಕೆಲವು ದಿನಗಳ ಹಿಂದೆ ಕಾರಣಾಂತರಗಳಿಂದ ಪೊಲೀಸರು ಮತ್ತು ಪುರಸಭೆಯ ಅಧಿಕಾರಿಗಳು ರೌಂಡ್ಸ್ ಹೋಗದೆ ಇದ್ದುದರಿಂದ ಮತ್ತು ಸಮಯ ಮೀರಿ ಓಡಾಟ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ಮಾಡದೆ ಇದ್ದುದರಿಂದ ಜನರು ಸಮಯ ಮೀರಿ ತಮ್ಮ ವಾಹನಗಳಲ್ಲಿ ಓಡಾಟ ಮಾಡಲು ಆರಂಭಿಸಿದ್ದರು. ಇದರಿಂದಾಗಿ ಪೇಟೆಯಲ್ಲಿ ವಾಹನಗಳ ಸಂಖ್ಯೆ ಜಾಸ್ತಿಯಾಗ ತೊಡಗಿತ್ತು.

ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ವಾಹನಗಳು ಸಂಚರಿಸುತ್ತಿರುವುದರ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ನಿರೀಕ್ಷಕ ಸುದೀಪ್ ನೇತೃತ್ವದ ತಂಡವು ಕಳೆದ ಮೂರು
ದಿನಗಳಿಂದ ಮತ್ತೆ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದು ಅನಗತ್ಯವಾಗಿ ತಿರುಗಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

Related Posts

Leave a Reply

Your email address will not be published.