ವಿಜಯಪುರದಲ್ಲಿ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ವಿಜಯಪುರ: ಕೇಂದ್ರ ಸರಕಾರ ನಿರಂತರವಾಗಿ ತೈಲ ಬೆಲೆ ಏರಿಸುವ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪ್ರಕಾಲಿ ಅವರು ಆರೋಪಿಸಿದ್ದಾರೆ.

ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಕಡಿಮೆ ಇದ್ದರು ಕೂಡ ಸರಕಾರ ಬೆಲೆಯನ್ನು ಗಗನಕ್ಕೆ ಏರಿಸುವ ಮೂಲಕ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ಇದು ಖಂಡನಿಯ’ ಎಂದರು. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ದಿನಬಳಕೆ ವಸ್ತುಗಳನ್ನು ಗಗನಕ್ಕೆ ಏರಿಸುವ ಮೂಲ ಬಡವರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಬಡವರು ಜೀವನ ನಡೆಸುವುದು ದುಸ್ತರವಾಗಿದ ಕೂಡಲೇ ಕೇಂದ್ರ ಸರಕಾರ ತೈಲ ಬೆಲೆಯನ್ನು ಕಡಿತಗೊಳಿಸುವ ಮೂಲಕ ಜನರನ್ನು ಹಿತ ಕಾಪಾಡಲು ಮುಂದಾಗಬೇಕು ಎಂದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡ ಹನೀಫ್ ಮಕಾನದಾರ, ಎ೦.ಆರ್, ಕಲಾದಗಿ ಇತರರು ಹಾಜರಿದ್ದರು

Related Posts

Leave a Reply

Your email address will not be published.