ವಿಜಯಪುರ : ಕುರಿ ಕಳ್ಳತನಕ್ಕೆ ಕಳ್ಳರ ವಿಫಲ ಯತ್ನ
ಕುರಿ ಕಳ್ಳತನಕ್ಕೆ ಕುರಿ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ.
ಇನ್ನು ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಕೊಳ್ಳುವ ಭಯದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಆದ್ರೂ, ಕುರಿ ಮಾಲೀಕ ಹಾಗೂ ಸ್ಥಳೀಯರು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದ ಕಳ್ಳರಲ್ಲಿ ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಬಿಟ್ಟು ಹೋಗಿದ್ದ ಕಾರಿ ಮೇಲೆ ಸ್ಥಳೀಯರು ರೊಚ್ಚಿಗೆದ್ದು ಕಲ್ಲು ಎಸೆದು ಜಖಂಗೊಳಿಸಿದ್ದಾರೆ. ಅಲ್ಲದೇ, ಕಾರ್ ಮಾಲೀಕನಿಗೆ ಪೊಲೀಸ ಠಾಣೆಗೆ ಬರುವಂತೆ ಮಾಹಿತಿ ನೀಡಿದ್ದು, ಪೊಲೀಸರ ತನಿಗೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.