ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ

ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ಒಟ್ಟು 36 ವಿವಿಧ ಕಂಪನಿಯ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ, ಬೈಕ್ ಕಳ್ಳತನ ನಡೆಸುತ್ತಿದ್ದ ತೌಸೀಫ್ ಮಹಿಬೂಬ ಕಲಾದಗಿ, ಸಮೀರ ಉಸ್ಮಾನಸಾಬ ಬಳಗಾನೂರ ಹಾಗೂ ಮಲ್ಲನಗೌಡ ಬಿರಾದಾರ ಎಂಬುವರನ್ನು ಬಂಧಿಸಿ ಬಂಧೀತರಿಂದ ಮೊತ್ತ 21,60,000  ಮೌಲ್ಯದ36 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಇನ್ನೂ ಈ ಮೂವರು ಕಳ್ಳರು ವಿಜಯಪುರ ಜಿಲ್ಲೆ ಸೇರಿದಂತೆ ನೆರೆಯ ಬಾಗಲಕೋಟ ಜಿಲ್ಲೆಯ ಜಮಖಂಡಿಯಲ್ಲೂ ಕಳ್ಳತನ ನಡೆಸುತ್ತಿದ್ದರು ಎಂದು ತಿಳಿಸಿದರು. ಇತ್ತಿಚೆಗೆ ವಿಜಯಪುರ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು, ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಎಡಿಷನಲ್ ಎಸ್ಪಿ ಡಾ.ರಾಮ ಅರಸಿದ್ದಿ , ಡಿವೈಎಸ್ಪಿ ಲಕ್ಷ್ಮೀನಾರಾಯಣ , ಸಿಪಿಐ ರವೀಂದ್ರ ನಾಯ್ಕೋಡಿ , ಪಿ.ಎಸ್.ಐ. ಆರೀಫ್ ಮುಶಾಪುರೆ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.