ವಿಟ್ಲದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ :ಮುಟ್ಟುಗೋಲು ಹಾಕಿದ ಪೊಲೀಸರು

ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.

ಜಿಲ್ಲಾಧಿಕಾರಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ.

ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಅದರ ಸವಾರರ ತೆರಳಿದ್ದರು. ಇದರಿಂದ ಪುತ್ತೂರು ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಈ ಬಗ್ಗೆ ಕಾರ್ಯಾಚರಣೆಗೆ ಇಳಿದ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ಸುಮಾರು ೨೭ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ದಂಡ ವಿಧಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಪ್ರೋಬೆಷನರಿ ಎಸೈ ಮಂಜುನಾಥ, ಎಎಸೈ ಕರುಣಾಕರ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

 

Related Posts

Leave a Reply

Your email address will not be published.