ವಿಟ್ಲ: ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ ಬೆದರಿಕೆ: ಅಂಗಡಿಯಲ್ಲಿದ್ದ ಬಟ್ಟೆ, ವಸ್ತು ದೋಚಿ ಪರಾರಿಯಾದ ತಂಡ

ವಿಟ್ಲ: ಡ್ರೆಸ್ ಶಾಪ್‌ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಕುಂಪಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ.
ಮಾರ್ಚ್ ೧೮ ರ ಮಧ್ಯಾಹ್ನ ವೇಳೆ ಏಕಾಏಕಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿದ ನಾಲ್ಕು ಜನರ ತಂಡ ಅಂಗಡಿಯಲ್ಲಿರುವ ವಸ್ತುಗಳನ್ನು ಹಾಗೂ ಬಟ್ಟೆಯನ್ನು ತನ್ನ ಬ್ಯಾಗಿನೊಳಗೆ ತುಂಬಿಸಿ ಕೊಂಡೋಯ್ಯಲು ಪ್ರಯತ್ನಿಸುತ್ತಿದ್ದಾಗ ಮಹಿಳಾ ಸಿಬ್ಬಂದಿಯು ಯಾಕೆ ಬಟ್ಟೆಗಳನ್ನು ತುಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆ ವ್ಯಕ್ತಿಯು ನಿನಗೆ ಎಷ್ಟು ಕೆಲಸವಿದೆಯೋ ಅಷ್ಟೇ ಮಾಡು, ನಮ್ಮ ಸುದ್ದಿಗೆ ಬಂದ್ರೆ ಜಾಗೃತೆ ಎಂದು ಬೆದರಿಸಿ ಬಲಾತ್ಕಾರದಿಂದ ಬಟ್ಟೆ ಮತ್ತು ವಸ್ತುಗಳನ್ನು ಕೊಂಡೊಯ್ದು ಪರಾರಿಯಾಗಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.