ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಅ.11 ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ.ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.

 

Related Posts

Leave a Reply

Your email address will not be published.