ವಿದ್ಯಾರ್ಥಿಗಳ ಭವಿಷ್ಯದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ: ಶಾಸಕ ಯು.ಟಿ. ಖಾದರ್
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು.
ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು ಸರ್ಕಾರಿ ಶಾಲೆಯಲ್ಲಿ ಸೂಕ್ತ ಕ್ಲಾಸ್ ರೂಮ್ ಇಲ್ಲ, ಮೂಲಭೂತ ಸೌಕರ್ಯವಿಲ್ಲದೇ ಬಿಕೋ ಅನ್ನುತ್ತಿದೆ. ಜೊತೆಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ, ಅದನ್ನು ನಿಗಿಸಲು ಸರ್ಕಾರ ಶಿಕ್ಷಕರ ನೇಮಕ ಇಲ್ಲವೇ, ಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನೇಮಕಗೊಳಿಸಬೇಕು. ಆಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟ ನಿಧಾರವನ್ನು ನೀಡಬೇಕು.. ಈ ಬಗ್ಗೆ ಜಿಲ್ಲಾಡಳಿತ ಯಾಕೆ ಮೌನವಹಿಸಿದೇ ಎಂದು ಅವರು ಪ್ರಶ್ನಿಸಿದರು. ತಕ್ಷಣವೇ ಜಿಲ್ಲಾಡಳಿತ ಬ್ಯಾಂಕ್ ಮ್ಯಾನೇಜರ್ ಕರೆದು, ವಿದ್ಯಾರ್ಥಿಗಳಿಗೆ ಸಾಲ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಬಿಜೆಪಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು, ವಿದ್ಯಾರ್ಥಿಗಳ ಅನ್ಯಾಯ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ರು