ವೈದ್ಯರ ನಡೆ ಹಳ್ಳಿ ಕಡೆ ಸರಕಾರದ ಯೋಜನೆ : ಕೊಂಪಪದವಿನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ಶೀತ, ಜ್ವರ ಇದ್ದವರು ಕೋವಿಡ್ 19 ಟೆಸ್ಟ್ ಗೆ ಹೋಗದೆ ಮನೆಯಲ್ಲಿ ಇರುತ್ತಾರೆ. ಅವರಲ್ಲಿ ಸೋಂಕಿತರು ಕೂಡ ಇರಬಹುದು. ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಟಾಸ್ಕ್ ಫೋರ್ಸ್ ಸದಸ್ಯರು ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.


ಅವರು ಕೊಂಪಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‌ಟಾಸ್ಕ್ ಫೋರ್ಸ್ ಸದಸ್ಯರಿಗೆ ತಮ್ಮ ವ್ಯಾಪ್ತಿಯಲ್ಲಿ ಯಾರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ತಿಳಿದಿರುತ್ತದೆ. ಅಂತವರಲ್ಲಿ ಜಾಗೃತಿ ಮೂಡಿಸುವ, ಚಿಕಿತ್ಸೆ ಕೊಡಿಸುವ ಕೆಲಸ ನಡೆಯಬೇಕು. ಈ ಕುರಿತು ವೈದ್ಯಕೀಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು. ಈ ಅಭಿಯಾನವನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರವಲ್ಲ ಪಾಲಿಕೆ ವ್ಯಾಪ್ತಿಯಲ್ಲಿಯೂ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ತಹಶಿಲ್ದಾರ್ ಗುರುಪ್ರಸಾದ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ‌ಗೌಡ, ಕೊಂಪದವು ಆರೋಗ್ಯ ಕೇಂದ್ರ, ನೋಡಲ್ ವೈದ್ಯರಾಗಿರುವ ಡಾ|ಕೃಷ್ಣ, ಕೊಂಪದವು ಆರೋಗ್ಯ ಕೇಂದ್ರದ ವೈದ್ಯರಾದ ಡಾ| ಚೈತನ್ಯ, ಮುಚ್ಚೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ,ಬಡಗ ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.