ಶಕ್ತಿನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜನತೆಗೆ ಈ ಆರೋಗ್ಯ ಕೇಂದ್ರ ಸೇವೆಯನ್ನು ನೀಡಲಿದೆ ಎಂದು ಹೇಳಿದರು.

ಆನಂತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮಾತನಾಡಿ, ಶಕ್ತಿನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೊಂಡಿದೆ. ಸುಸಜ್ಜಿತ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಲಭ್ಯರಿದ್ದು, ಜತೆಗೆ ಉತ್ತಮ ಸೇವೆ ನೀಡಲು ಸಜ್ಜಾಗಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಡಿಹೆಚ್‍ಒ ಡಾ. ಕಿಶೋರ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಕ್ತಿ ವಿದ್ಯಾ ಸಂಸ್ಥೆಯ ಡಾ. ಕೆ.ಸಿ. ನಾಯಕ್, ಸ್ಥಳೀಯ ಕಾರ್ಪೋರೇಟ್ ವನಿತಾ ಪ್ರಸಾದ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಹೆಚ್.ಕೆ. ಪುರುಷೋತ್ತಮ, ಸುಧೀರ್ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.