ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳಿಗೆಂದು ಕೊಡುವ ಮೊಟ್ಟೆಗಳನ್ನು ಅಕ್ರಮವಾಗಿ ಮಾರಾಟದಲ್ಲಿ ಶಾಮೀಲಾಗಿರುವುದು ಬೆಳಕಿಗೆ ಬಂದಿದ್ದು, ಸರ್ಕಾರದಿಂದ ಕೊಡುವ ಮೊಟ್ಟೆಗಳು ಸರಿಯಾಗಿ ಮಕ್ಕಳಿಗೆ ಸಿಗದಿರುವ ಪರಿಸ್ಥಿತಿಯಲ್ಲಿ ಈ ರೀತಿಯಾಗಿ ಮೊಟ್ಟೆ ಹಗರಣದಲ್ಲಿ ಶಾಮೀಲಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯಕಿಡಿಕಾರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯುಐ ಉಪಾಧ್ಯಕ್ಷರಾದ ಆಸ್ಟನ್ ಸ್ವಿಕ್ವೇರಾ, ಅಂಕುಶ್ ಶೆಟ್ಟಿ, ನಿಕಿಲ್ ಪೂಜಾರಿ, ಮುಖಂಡರಾದ ಪವನ್ ಸಾಲ್ಯಾನ್, ಶಫೀಕ್, ರಿಲ್ವಾನ್ ಉಪಸ್ಥಿತರಿದ್ದರು.