ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ ಜಲಾವೃತ
ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿಯ ಸಮಸ್ಯೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಉಡುಪಿ ನಗರದಲ್ಲಿ ಒಳಚರಂಡಿಯ ಅವ್ಯವಸ್ಥೆಯಿಂದಾಗಿ ಪ್ರತಿ ವರ್ಷವೂ ಹಲವು ಕಡೆಗಳಲ್ಲಿ ಕೃತಕ ನೆರೆ ಉಂಟಾಗುತ್ತಿದೆ.