ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಈ ದೇಶಕ್ಕೆ ಅಂಟಿರುವ ಕೊರೋನಾ ಮಹಾಮಾರಿ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದ‌ ಅವರು, ಈಗಾಗಲೇ ಪರಿಶಿಷ್ಟ ಜಾತಿಯವರಿಗೆ ಮನೆ ನಿರ್ಮಾಣ ಮಾಡಲು 5 ಲಕ್ಷ ರೂ ನೀಡಲು ಹಣಕಾಸು ಇಲಾಖೆಯ ಜೊತೆ ಚರ್ಚೆ ನಡೆಸಿದ್ದೇನೆ. ಸೋಮವಾರ ಮತ್ತೆ ಪುನಃ ಸಭೆ ಕರೆಯಲಾಗಿದೆ. ಇಲಾಖೆಯಲ್ಲಿ ಪಾರದರ್ಶಕವಲ್ಲದ ಯೋಜನೆಗಳನ್ನು ರದ್ದುಪಡಿಸಿ ಬಡವರಿಗೆ ಮೂಲಭೂತ ಸೌಕರ್ಯ ನೀಡಲು ಬೇಕಾದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು.

ಸಂಘಟನೆಯ ಕಾರ್ಯಕರ್ತರ ಮೇಲೆ ಕೆಲವು ಸುಳ್ಳು ಕೇಸ್ ಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಡಲಾಗಿತ್ತು. ಆ ಕೇಸ್ ಗಳನ್ನು ಹಿಂಪಡೆಯುವಂತೆ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದೇನೆ. ಸಕರಾತ್ಮಕವಾಗಿ ಸ್ಪಂದಿಸಿದ ಅವರು ಎಲ್ಲಾ ಫೈಲ್ ಗಳನ್ನು ತರಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ ಎಂದರು.

Related Posts

Leave a Reply

Your email address will not be published.