ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.

ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು ಗುರುತಿಸಲಾಗಿದೆ. ಬಂಧಿತರು ತಮಗೆ ಬಂದಿದ್ದ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ಪಾರ್ವಾಡ್ ಮಾಡಿದ್ದಾರೆ. ಈ ಸಂದೇಶದ ಮೂಲ, ಸತ್ಯಾಸತ್ಯತೆ ಹಾಗೂ ಇತರರು ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತಂತೆ ತನಿಖೆ ನಡೆಯತ್ತಿದೆ ಎಂದು ಆಯುಕ್ತರು ತಿಳಿಸಿದರು.

Related Posts

Leave a Reply

Your email address will not be published.