ಸಾಮೂಹಿಕ ಅತ್ಯಾಚಾರ ಪ್ರಕರಣ : ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.