ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು.

ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ ಸಾವಿರಾರು ಕುಟುಂಬಕ್ಕೆ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ ಎಂದು

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟು ನಡೆಸಿ ಮಾತನಾಡಿ, ಗಣಪತಿ ಹಬ್ಬಕ್ಕೆ ಮೂರ್ತಿದಾರರು ನಾಲ್ಕಾರು ತಿಂಗಳ ಮುಂಚಿತವಾಗಿ ಮೂರ್ತಿಯನ್ನು ತಯಾರಿಸುತ್ತಾರೆ ಅವರ ಸ್ಥಿತಿ ಏನು ಎಂಬುವುದನ್ನು ಅರ್ಥಮಾಡಿಕೊಳ್ಳಬೇಕು. ಶಾಮಿಯಾನ, ವಿದ್ಯುತ್‌ದೀಪ ವಾದ್ಯವೃಂದ ಅವಲಂಬಿತರಾಗಿದ್ದ ಅವರ ಸ್ಥಿತಿ ಚಿಂತಾಜನಕವಾಗಿದೆ. ಕೋವಿಡ್ ನಿಯಮ ಪಾಲಿಸಿ ಚುನಾವಣೆ, ರಾಜಕೀಯ ಸಮಾವೇಶ ಹೇಗೆ ನಡೆಯುತ್ತಿದೆಯೋ ಅದೇ ರೀತಿ ಗಣೇಶ್ ಉತ್ಸವ ಸಮಿತಿ ಆಚರಿಸಲು ಅನುಮತಿಯನ್ನು ನೀಡಬೇಕು ಇಲ್ಲವಾದಲ್ಲಿ ಆಗಸ್ಟ್ 30ರದು ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷರಾದ ಪ್ರದೀಪ್ ಮೂಡುಶೆಡ್ಡೆ, ಉಪಧ್ಯಕ್ಷರಾದ ಹರೀಶ್ ಬೊಕ್ಕಪಟ್ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಿಶೋರ್ ಸನಿಲ್, ನಗರ ಕಾರ್ಯದರ್ಶಿ ವೆಂಕಟೇಶ ಪಡಿಯಾರ್ ಮತ್ತಿತರರು ಉಪಸ್ಥಿತರಿದ್ದರು.

 

 

Related Posts

Leave a Reply

Your email address will not be published.