ಸುಳ್ಯದಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ : ಕಾನೂನು ಕಾಲೇಜು ವಿದ್ಯಾರ್ಥಿಯೊಬ್ಬ ಶನಿವಾರ ಮುಂಜಾನೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ . ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .
ಆತ್ಮಹತ್ಯೆ ಮಾಡಿಕೊಂಡ ನಿತೇಶ್ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ದ್ವಿತೀಯ ಸಾಲಿನ ಎಲ್ ಎಲ್ ಬಿ ವಿದ್ಯಾರ್ಥಿಯಾಗಿದ್ದರು. ಕಾಲೇಜಿಗೆ ತೆರಳಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಇವರು ಲಾಕ್ ಡೌನ್ ಹಿನ್ನಲೆ ಸದ್ಯ ಮನೆಯಲ್ಲಿಯೇ ಇದ್ದರು. ಮನೆಯಲ್ಲಿದ್ದ ಸಂದರ್ಭ ನಿತ್ಯ ಅನ್ ಲೈನ್ ತರಗತಿಯಲ್ಲಿ ಭಾಗವಹಿಸುತಿದ್ದರು.ಇಂದು ಬೆಳಿಗ್ಗೆ ನಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ..ಮೃತರು ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.