ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಪ್ರತಿಭಟನೆ
ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಎರಡು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಪ್ರಕಟಿಸುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.