ಸೇಡಿಯಾಪುವಿನಲ್ಲಿ ರಸ್ತೆಗೆ ಅಡ್ಡವಾಗಿ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

Related Posts

Leave a Reply

Your email address will not be published.