ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ ಎಂದು ಜಿ.ಪಂ.ಮಾಜೀ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ.

ಅವರು ಮಂಜೇಶ್ವರ ಪ್ರೆಸ್ ಕ್ಲಬ್ ವತಿಯಿಂದ ಜರುಗಿದ 75ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ರಹಿಮಾನ್ ಉದ್ಯಾವರ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಪತ್ರಕರ್ತರಾದ ರತನ್ ಕುಮಾರ್ ಹೊಸಂಗಡಿ , ರವಿ ಪ್ರತಾಪನಗರ, ಛಾಯಾಗ್ರಾಹಕರಾದ ದೀಪಕ್ ರಾಜ್ ಉಪ್ಪಳ ಮುಂತಾದವರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.