ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು ಗಾಂಧೀಜಿಯವರು, ಅವರಿಗೆ ಶ್ರೇಷ್ಠ ಸ್ಥಾನಮಾನವಿದೆ. ಇತಿಹಾಸ ಪುರುಷರಿಗೆ ಅವಮಾನ ಮಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್, ಹಿಂದುಳಿದ ವರ್ಗ ವಿಭಾಗದ ಜಿಲ್ಲಾಧ್ಯಕ್ಷ ವಿಶ್ವಾಸ್‍ದಾಸ್ ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

 

Related Posts

Leave a Reply

Your email address will not be published.