ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ . 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದರು. ಈ ಹಿಂದೆ ಯಡಿಯೂರಪ್ಪ ರವರ ಸರ್ಕಾರದಲ್ಲಿ ಸಚಿವರಾಗಿದ್ದರು.ಆರು ಬಾರಿ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದರು.