ಉಳ್ಳಾಲದಲ್ಲಿ ಉಚಿತ ರಕ್ತದಾನ ಶಿಬಿರ

ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು.

ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100 ಯುನಿಟ್‌ಗಳಷ್ಟು ರಕ್ತವನ್ನು ಈ ಕಾರ್ಯಕ್ರಮದ ಮೂಲಕ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ರಕ್ತನಿಧಿಗೆ ನೀಡಲಾಯಿತು.

ಟೀಂ ಬಿ-ಹ್ಯೂಮನ್ ಇದರ ಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಸ್ವತಃ ರಕ್ತದಾನ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷರಾದ ಶ್ರೀ ರಝಾಕ್ ಹಾಜಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಳ್ಳಾಲ ಠಾಣೆಯ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್, ಟೀಮ್ ಬಿ-ಹ್ಯುಮನ್ ಸ್ಥಾಪಕರಾದಆಸಿಫ್ ಡೀಲ್ಸ್, ಸಯ್ಯದ್ ಮದನಿ ದರ್ಗಾ ಶರೀಫ್ ಅಧ್ಯಕ್ಷರಾದ ರಶೀದ್ ಹಾಜಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನಕಾರ್ಯದರ್ಶಿ ಸುಹೈಲ್ ಕಂದಕ್, ಸ್ಥಳೀಯ ನಗರಸಭಾ ಕೌನ್ಸಿಲರ್ ಮಹಮ್ಮದಾಕ, ರೆಡ್ ಕ್ರಾಸ್ ಸೊಸೈಟಿ ಕಾರ್ಯಪ್ರವೃತ್ತಕ ಪ್ರವೀಣ್ ಕುಮಾರ್, ಕಾಂಗ್ರೆಸ್ ಮುಖಂಡ ಯೂ.ಬಿ ಸಲೀಂ, ಟೀಂ ಬಿ-ಹ್ಯೂಮನ್ ನ ನಾಸಿರ್ ಉಚ್ಚಿಲ, ಉಳ್ಳಾಲ ನಗರಸಭೆ ಕೌನ್ಸಿಲರ್ ಗಳಾದ ಇಬ್ರಾಹಿಂ ಖಲೀಲ್ ಹಾಗೂ ಸ್ವಪ್ನ ಹರೀಶ್ ಮುಂತಾದವರು ಭಾಗವಹಿಸಿದ್ದರು.

 

ಈ ಸಂದರ್ಭದಲ್ಲಿ ಉಳ್ಳಾಲ ಠಾಣಾ ಸರ್ಕಲ್ ಇನ್ಸೆಪೆಕ್ಟರ್ ಸಂದೀಪ್ ಜಿ.ಎಸ್ ರವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ರಕ್ತದಾನದ ಮಹತ್ವವನ್ನು ವಿವರಿಸಿದರು ಅದೇರೀತಿ ಟೀಮ್ ಬಿ-ಹ್ಯೂಮನ್ ಹಾಗೂ (ಒಈಅ) ಮುಕ್ಕಚೇರಿ ಫ್ರೆಂಡ್ಸ್ ಸರ್ಕಲ್ ಇದರ ಸಮಾಜ ಸೇವಾ ಕಾರ್ಯಗಳ ಬಗ್ಗೆ ಅತೀವ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಿವಿಲ್ ಸರ್ವೀಸಸ್ ನಂತಹ ವೃತ್ತಿಪರ ಪರೀಕ್ಷೆಗಳ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸುವಂತೆಯೂ ಅದಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು ಹಾಗೆಯೇ ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ರಶೀದ್ ಹಾಜಿ ಹಾಗೂ ಕೌನ್ಸಿಲರ್ ಮಹಮ್ಮದ್ರವರು ರಕ್ತದಾನದ ಮಹತ್ವದ ಬಗ್ಗೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮನ್ಸೂರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮುಕಚ್ಚೇರಿ ಫ್ರೆಂಡ್ಸ್ ಸರ್ಕಲ್ ನ ಉಪಾಧ್ಯಕ್ಷರಾದ ಇಸ್ಮಾಯಿಲ್ ರವರು ಧನ್ಯವಾದ ಸಮರ್ಪಿಸಿದರು.

 

Related Posts

Leave a Reply

Your email address will not be published.