ಹಿಂದುಳಿದ ವರ್ಗಕ್ಕೆ ಪ್ಯಾಕೇಜ್ ಇಲ್ಲ: ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್

ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು.

ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಹಿಂದುಳಿದ ವರ್ಗದ ಜನರ ಕುರಿತು ಕೂಡಲೇ ಎಚ್ಚೆತ್ತುಕೊಂಡು ಸಹಾಯ ಮಾಡಬೇಕಾಗಿದೆ. ಕಷ್ಟದಲ್ಲಿರುವವರಿಗೆ ಒಂದು ತಿಂಗಳ ಆಹಾರದ ಕಿಟ್‍ನ್ನು ಪ್ರತಿ ಗ್ರಾಮ ಮಟ್ಟದಲ್ಲಿ ನೀಡಬೇಕು. ಇನ್ನು ಸಾಲ ವಸೂಲಾತಿಗಾಗಿ ಬ್ಯಾಂಕ್ ನವರು ಮನೆಗೆ ದಾಳಿ ಮಾಡುತ್ತಿರುವ ಘಟನೆ ಬೆಳಕಿಗೆ ಬರುತ್ತಿದೆ. ಸರ್ಕಾರ ಬಡ್ಡಿಮನ್ನಾ ಮಾಡಲು ಹೇಳಿದರೂ ಬ್ಯಾಂಕ್‍ನವರು ಮಾನವೀಯತೆ ತೋರುತ್ತಿಲ್ಲ. ಬೇರೆ ರಾಜ್ಯದವರು ಹೆಚ್ಚಿನ ಪ್ಯಾಕೇಜ್ ಘೋಷಿಸಿದರೂ ನಮ್ಮ ಸರ್ಕಾರಕ್ಕೆ ಯಾಕೆ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ ಎಂದರು. ಇನ್ನು ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಹಾಗೂ ಲಸಿಕೆ ನೀಡುವಲ್ಲಿ ವಿಫಲವಾಗಿದೆ.

Related Posts

Leave a Reply

Your email address will not be published.