14ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2024 ಸಂಪನ್ನ: 2468 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ

 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ

ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್ಲಿಸ್ಟ್ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 14780 ಅಭ್ಯರ್ಥಿಗಳು ಭಾಗವಹಿಸಿದರು.

ಬೆಂಗಳೂರಿನ ಸರ್ಕಾರಿ ಎಸ್‌ಕೆಎಸ್‌ಜೆ ಟೆಕ್ನಾಲಜಿ ಇನ್ಸಿಸ್ಟಿಟ್ಯೂಟ್ ಇಂಜಿನಿಯರಿಂಗ್ ಕಾಲೇಜಿನ 43 ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇರೆಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ಉಚಿತ ವಾಹನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿ, ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಇಲ್ಲಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಇಜಿ ಇಂಡಿಯಾ, ಇಸಿಯಾ ಸಾಫ್ಟ್ ಹಾಗೂ ಫ್ಲಿಪ್ ಕಾರ್ಟ್ ಕಂಪೆನಿಗಳಿಗೆ ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾರೆ.

Related Posts

Leave a Reply

Your email address will not be published.