Home 2021 June (Page 10)

ಕಾಪುವಿನಲ್ಲಿ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ ಕಾಪುವಿನಲ್ಲಿ ನಡೆಯಿತು. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ, ಕೇಂದ್ರ ಸರ್ಕಾರಗಳ ಹಾಗೂ ಕಾಪು ಶಾಸಕರ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಾರೆ. ನೂರಾರು ಕಾರ್ಯಕರ್ತರು ಕಾಪು ರಾಜೀವ

ದ.ಕ. ಜಿಲ್ಲೆಯಲ್ಲಿ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ

SRINIVAS UNIVERSITY – International Yoga Day 2021

SRINIVAS UNIVERSITY – BBA PORT SHIPPING MANAGEMENT AND LOGISTICS, college of Management and commerce celebrated International Yoga Day 2021 with much enthusiasm and passion with the theme ‘Yoga for wellness – Yoga for Health at home”. Yoga is a ray of hope against Covid-19 as said by our

ವಿಟ್ಲದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ :ಮುಟ್ಟುಗೋಲು ಹಾಕಿದ ಪೊಲೀಸರು

ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಜಿಲ್ಲಾಧಿಕಾರಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ. ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ

ವಿ4 ನ್ಯೂಸ್‌ಗೆ 16ರ ಸಂಭ್ರಮ: ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ

ಕರಾವಳಿ ಕರ್ನಾಟಕದಲ್ಲಿ ಮನೆ ಮಾತಾಗಿರುವ ವಿ4ನ್ಯೂಸ್ ವಾಹಿನಿಗೆ 16ರ ಸಂಭ್ರಮ. ಈ ಸಂಭ್ರಮವನ್ನು ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ ಸಲ್ಲಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಕರಾವಳಿಯಲ್ಲಿ ನಡೆಯುವ ಕ್ಷಿಪ್ರ ಬೆಳವಣಿಗೆಗಳನ್ನು ನೇರಪ್ರಸಾರದಲ್ಲೇ ಅತ್ಯಂತ ವೇಗವಾಗಿ ಪ್ರಸಾರ ಮಾಡುವ ನ್ಯೂಸ್ ಬುಲೆಟಿನ್‌ಗಳು, ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಡಿಬೇಟ್

ಡಾ. ಎನ್‌ ಎಸ್‌ ಎಎಂ ಪಿಯು ಕಾಲೇಜಿನಲ್ಲಿ ಯೋಗ ದಿನಾಚರಣೆ

 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಡಾ. ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಕಾಲೇಜು ಮತ್ತು ಕಾಲೇಜಿನ ಎನ್‌ಎಸ್‌ಎಸ್ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವಾರು ಮಂದಿ ಯೋಗ ಪ್ರದರ್ಶನ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪತಂಜಲಿ ಯೋಗ ಶಿಕ್ಷಣ ಸಮಿತಿಯ

ಎನ್‌ಎಂಪಿಟಿಯಲ್ಲಿ ಸಮುದ್ರಕ್ಕೆ ಉರುಳಿದ ಕಂಟೈನರ್ ಲಾರಿ: ಚಾಲಕ ಮೃತ್ಯು: ಓರ್ವ ನಾಪತ್ತೆ

ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ 10ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ. ಕಂಟೈನರ್ ಲಾರಿ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಲಾರಿ ಕ್ಲೀನರ್ ಭೀಮಪ್ಪ (35) ನಾಪತ್ತೆಯಾಗಿದ್ದಾರೆ. ಭೀಮಪ್ಪ ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ ಎಂದು

ರಸ್ತೆಯಲ್ಲಿ ಕೂತು ಅಡುಗೆ ಮಾಡಿದ ಶೋಭಾ ಕರಂದ್ಲಾಜೆ ಈಗ ಎಲ್ಲಿ?: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಶ್ನೆ

ಕುಂದಾಪುರ: ಹಿಂದೆ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಗ್ಯಾಸ್ ಬೆಲೆ 414 ರೂ. ಇದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಕೂತು ಅಡುಗೆ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟಿಸಿದ ಶೋಭಾ ಕರಂದ್ಲಾಜೆಯವರು ಈಗ ಎಲ್ಲಿಗೆ ಹೋಗಿದ್ದಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಶ್ನಿಸಿದ್ದಾರೆ. ಅವರು ಸೋಮವಾರ ಬೆಳಿಗ್ಗೆ ತ್ರಾಸಿ

V4news ವಾಹಿನಿಯಲ್ಲಿ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಿದ ಶಾಸಕ ಡಾ.ಭರತ್ ಶೆಟ್ಟಿ

V4 ವಾಹಿನಿ ಆರಂಭವಾಗಿ 16 ವರ್ಷಗಳು ಸಂದಿರುವ ಇವತ್ತು ಯೆಯ್ಯಾಡಿಯಲ್ಲಿರುವ ಚಾನೆಲ್ ನ ಸ್ಟುಡಿಯೋದಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಚಾನೆಲ್ ಪರವಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿ4 ನ್ಯೂಸ್ ವಾಹಿನಿಯ ಆಡಳಿತ ನಿರ್ದೇಶಕರಾದ ಲಕ್ಷ್ಮಣ್

‘ಸ್ವಾಸ್ಥ್ಯಕ್ಕಾಗಿ ಯೋಗ’ ಎಂಬುದು ಈ ಬಾರಿಯ ಯೋಗ ದಿನದ ವಸ್ತುವಿಷಯ:ಪ್ರಧಾನಿ ನರೇಂದ್ರ ಮೋದಿ

‘ಇಡೀ ಜಗತ್ತು ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಈ ಹೊತ್ತಿನಲ್ಲಿ ಯೋಗ ಭರವಸೆಯ ಅಶಾಕಿರಣವಾಗಿದೆ. ಸಾಂಕ್ರಾಮಿಕ ಅವಧಿಯಲ್ಲಿ ಯೋಗ ಕಡೆಗಿನ ಜನರ ಉತ್ಸಾಹ ಕಡಿಮೆಯಾಗಿಲ್ಲ. ಕೋವಿಡ್‌ ವಿರುದ್ಧದ ರಕ್ಷಣೆಗಾಗಿ ವೈದ್ಯರೂ ಯೋಗದ ಮೊರೆ ಹೋಗಿದ್ದಾರೆ,’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಶ್ವ ಯೋಗ ದಿನ. ‘ಸ್ವಾಸ್ಥ್ಯಕ್ಕಾಗಿ