Home 2021 June (Page 21)

ವಿಜಯಪುರದಲ್ಲಿ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ವಿಜಯಪುರ: ಕೇಂದ್ರ ಸರಕಾರ ನಿರಂತರವಾಗಿ ತೈಲ ಬೆಲೆ ಏರಿಸುವ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪ್ರಕಾಲಿ ಅವರು ಆರೋಪಿಸಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ.

ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ

ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು

ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು

ಹಾಸನ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್: ಸಚಿವ ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ

ಪುಟ್ಟ ಮಗುವಿನೊಂದಿಗೆ ಬೀದಿ ಪಾಲಾಗಿದ್ದ ಸಂಸಾರಕ್ಕೆ ನೆರವಾದ ಟೀಂ- ಬಿ ಹ್ಯೂಮನ್ ಮತ್ತು ಟೀಂ ಐ.ವೈ.ಸಿ

ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಬಂಗೇರ ನಿಧನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು

ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ

ತುಳುಕೂಟ ಕತಾರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು.  JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ

ದೇಗುಲ ದರ್ಶನಕ್ಕೆ ಸಭೆ ನಡೆಸಿ ತೀರ್ಮಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಮ ಅಹವಾಲುಗಳನ್ನು ಹೇಳಿ ಆದಷ್ಟು ಬೇಗ ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡು ದೇವಸ್ಥಾನಗಳನ್ನು