Home 2021 August (Page 4)

ಮಂಗಳೂರು ಪೊಲೀಸರಿಂದ 112 ಬಗ್ಗೆ ಜಾಗೃತಿ ಅಭಿಯಾನ

ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ

ಸರಕಾರಿ ಆಸ್ಪತ್ರೆಯ ಪ್ರಖ್ಯಾತ ವೈದ್ಯರಾದ ಡಾ.ಸಂದೀಪ್ ಕುಮಾರ್ ಬೋರ್ಕರ್ ನಿಧನ

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ

ಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ

ಯುವಕರಿಬ್ಬರಿದ್ದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಮುದರಂಗಡಿಯಲ್ಲಿದ್ದ ಪಾರ್ಟಿಯೊಂದರಲ್ಲಿ ಪಾಲ್ಗೊಂಡು ಎರ್ಮಾಳಿಗೆ ಮರಳುತ್ತಿದ್ದ ಯುವಕರಿಬ್ಬರಿದ್ದ ಸ್ಕೂಟರ್ ಅದಮಾರಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರು ಎರ್ಮಾಳು ಬಡಾ ನಿವಾಸಿಗಳಾದ ಪವನ್ ಹಾಗೂ ತಿಲಕ್ ಎಂದು ತಿಳಿದು ಬಂದಿದೆ. ಇವರು ಗೆಳೆಯರೊಂದಿಗೆ ಪಾರ್ಟಿ ಮುಗಿಸಿ ಮರಳುತ್ತಿದ್ದಾಗ ಈ

ಸಾಮೂಹಿಕ ಅತ್ಯಾಚಾರ ಪ್ರಕರಣ : ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು,

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ

ಕೇಂದ್ರದ ಸರ್ಕಾರದ ಖಾಸಗೀಕರಣ ಯೋಜನೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.   ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ

ಕಡಬದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 40 ಕೆಜಿ ದನದ ಮಾಂಸ ಸಹಿತ ಓರ್ವನ ವಶಕ್ಕೆ

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ