Home 2021 September (Page 10)

ಉಡುಪಿಯಲ್ಲಿ ಅಸಾಯಕರಿಗೆ ನೀಡುತ್ತಿದ್ದ ಅನ್ನದಾನದ ಸಮಾರೋಪ

ಉಡುಪಿ: ಕೊರೊನ 2ನೇ ಲಾಕ್‌ಡೌನ್ ಪ್ರಾರಂಭದಿಂದ ಅಸಹಾಯಕ ವೃದ್ಧರು ಅಂಗವಿಕಲರು ಮಾನಸಿಕ ರೋಗಿಗಳಿಗೆ ಹಸಿದವರ ಹಸಿವು ನೀಗಿಸಿದ ವಿಶು ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಮೀನ್ ಮಧ್ವ ನಗರ ಹೇಳಿದರು. ಇದೀಗ ಸೆಪ್ಟೆಂಬರ್ 23ತಾರೀಕಿನಿಂದ ಕೃಷ್ಣ ಮಠದಲ್ಲಿ ಅನ್ನ ಪ್ರಸಾದ ಪ್ರಾರಂಭವಾದ ಹಿನ್ನೆಲೆಯಲ್ಲಿ ಅನ್ನದಾನ ಕಾರ್ಯಕ್ರಮ

ತಲ್ಲೂರು ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

ಕುಂದಾಪುರ: ಪ್ರತೀ ವಷರ್ಷವೂ ಬಿರುಬೇಸಿಗೆಯಲ್ಲಿ ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಪಿಂಗಾಣಿಗುಡ್ಡೆ ಹಾಗೂ ಉಪ್ಪಿನಕುದ್ರು ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಾರೆ. ಸೌಕೂರು ಏತ ನೀರಾವರಿ ಯೋಜನೆಯ ಮೂಲ ಯೋಜನೆಯಂತೆ ತಲ್ಲೂರು ಗ್ರಾ.ಪಂ ವ್ಯಾಪ್ತಿಗೆ ನೀರು ಕಲ್ಪಿಸಲು ಮೂಲನಕ್ಷೆ ತಯಾರಿಸಲಾಗಿತ್ತು. ಆದರೆ ರಾಜಕೀಯ ಸ್ವಹಿತಾಸಕ್ತಿಗಳಿಗಾಗಿ ಮೂಲ ಯೋಜನೆಯನ್ನು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್

ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ

ಬೆಳಪು ಹಾಲು ಉತ್ಪಾದಕರ ವಾರ್ಷಿಕ ಸಭೆ

ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು.

ಕುಬಣೂರಿನ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆ

ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ

ಘನತ್ಯಾಜ್ಯ ನಿರ್ವವಣೆ ಮಾಡದೆ ಜನರ ಮೇಲೆ ಬರೆ : ಪಾಲಿಕೆ ವಿಪಕ್ಷ ನಾಯಕ ಎ.ಸಿ. ವಿನಯ್ ರಾಜ್ ಆರೋಪ

ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು