ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್ 27ರಂದು ಬಸ್ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು
Month: October 2022
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು. ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ
ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮುತ್ತಿರುವ ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಸ್ವಚ್ಚತೆಗೆ ಗಮನಹರಿಸದಿರುವುದು ವಿಷಾದನೀಯ ಸಂಗತಿ, ನಗರದ ಕದ್ರಿ ಮಲ್ಲಿಕಟ್ಟೆ ಸಮೀಪದ ವಾರ್ಡ್ ನಂಬರ್ 33ರ ಜುಗುಲ್ ಹಾಲ್ ಹಿಂಬದಿಯ ರಸ್ತೆಯಲ್ಲಿ ಮನೆಗಳ ಮುಂದೆ ಕಳೆದ ಮೂರು ದಿನಗಳಿಂದ ಚರಂಡಿ ತುಂಬಿ ಹರಿಯುತ್ತಿದೆ, ಸಮಸ್ಯೆ ಬಗೆಹರಿಸುವುದಾಗಿ ನಗರಪಾಲಿಕೆ ಅಧಿಕಾರಿಗಳು ಭರವಸೆ
ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರೌಢ ವಿಭಾಗದ ಅಧ್ಯಕ್ಷ ಪುರುಷೋತ್ತಮ್ ಅಂಚನ್ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ರಾಮಚಂದ್ರ, ರಾಜೇಶ್
ಬಿ.ನಾರಾಯಣ ನಾಯಕ್ ಎಂಬುವರ ಮನೆಯ ಸಮೀಪ ಒಂದು ವಾರದಿಂದ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆವರಣ ಗೋಡೆ ಕುಸಿಯುವ ಸಾಧ್ಯತೆಯನ್ನು ಮನೆಯ ಮಾಲೀಕರು ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ ಮುಂದುವರಿಸಲಾಗಿತ್ತು ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈರಪ್ಪ ಅವರ ಮೇಲೆ ಗೋಡೆ
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಹಾಡುಗಳನ್ನು ಹಾಡಿದರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ
ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ. ಟೋಲ್ ಗೇಟ್ ಪರಿಸರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು, ಭರವಸೆಗಳು ಬೇಡ, ಟೋಲ್ ನಿಲ್ಲಿಸಿ ಎಂದು
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿಸಮುದ್ರದ ಅಲೆಗಳ ನಿನಾದದಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಕಡಲಯಾನದಲ್ಲಿ ಕೋಟಿ ಕಂಠ
ಬೈಂದೂರು : ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ ನಲ್ಲಿ ಕೋಟಿ ಕಂಠ ಗಾಯನ ಶುಕ್ರವಾರ ಕಾರ್ಯಕ್ರಮ ಶಾಸಕ ಬಿ,ಎಮ್ ಸುಕುಮಾರ್ ಶೆಟ್ಟಿ ಮುಂದಾಳತ್ವದಲ್ಲಿ ಕಾರ್ಯಕ್ರಮ ಜರಗಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನೆಲದ ಸಂಸ್ಕೃತಿ ಮತ್ತು ಭಾಷೆಯನ್ನು ಕೋಟಿ ಕಂಠ ಗಾಯನದ ಮೂಲಕ ರಾಜ್ಯ ಹಾಗೂವಿಶ್ವಾದ್ಯಂತ ಆಚರಿಸಲಾಗುತ್ತಿದೆ ನಾಡು ಜಲ, ನೆಲದ ,
ಅರುಣ್ ಕುಮಾರ್ ಅ.27ರಂದು ಸಂಜೆ 7ಗಂಟೆ ಸುಮಾರಿಗೆ ಫಲ್ಗುಣಿ ನದಿಗೆ ಹಾರಿದ್ದರು. ಇಂದು ಬೆಳಗ್ಗಿನಿಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ ಅವರು ಪತ್ತೆಯಾಗಿಲ್ಲ. ಅರುಣ್ ಕುಮಾರ್ ವಿವಾಹಿತರಾಗಿದ್ದು, ಒಂದು ಮಗು ಕೂಡಾ ಇದೆ. ಅವರು ನದಿಗೆ ಹಾರಿರುವುದಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























