Home 2022 November (Page 2)

ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ ಬಿಜೆಪಿಯ ರಾಜಕಾರಣ. ಮುನೀರ್ ಕಾಟಿಪಳ್ಳ

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ

ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿ : ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪ

ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.

ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ

ಕೊಲಂಬೊ : ಭಾರತೀಯ ಮೀನುಗಾರನ್ನುಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ

ರಾಂಕ್ ಸ್ಟೂಡೆಂಟ್ ಕಡಿಮೆ ಮಾರ್ಕ್ ಬಂದಿದ್ದಕ್ಕೆ ಆತ್ಮಹತ್ಯೆ

ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು

ಕೊರಗ ಕುಟುಂಬಗಳಿಗೆ ಮನೆ ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಪಾದಯಾತ್ರೆ

ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಮಂಗಳೂರಿನ

ಮೂಡುಬಿದರೆ : ಭಯೋತ್ಪಾದನೆ, ಲವ್ ಜಿಹಾದ್ ವಿರೋಧಿಸಿ ಪ್ರತಿಭಟನೆ

ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ – ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದೇಶಾದ್ಯಂತ ಬಾಂಬನ್ನು ಸ್ಫೋಟಿಸಿ ಸಮಾಜದಲ್ಲಿ ಭಯವನ್ನು

ಇತಿಹಾಸ ಪ್ರಸಿದ್ಧ ನಾವುಂದ ಕಂಬಳ ಮಹೋತ್ಸವ

ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವವು ಸಂಭ್ರಮದಲ್ಲಿ ನಡೆಯಲಿರುವುದು. ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ . ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ, ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ನಟ ರಿಷಬ್ ಶೆಟ್ಟಿ ಸಹಿತ ಕಾಂತಾರ ಚಿತ್ರ ತಂಡ ಆಗಮನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಡಿಸೆಂಬರ್ 4 ರಂದು ಭಾನುವಾರ ಸಂಜೆ 4 ಗಂಟೆಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ