Home 2023 February (Page 5)

ಮುಂಡ್ಕೂರು ಗ್ರಾಮದ ಉಗ್ಗೆದಬೆಟ್ಟುವಿನಲ್ಲಿ ಅಕ್ರಮ ಮರಳುಗಾರಿಕೆ : ಸ್ಥಳೀಯರ ಆಕ್ರೋಶ, ತಡೆ

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋ ಒಂದನ್ನು ತಡೆದು ನಿಲ್ಲಿಸಿದ ಸ್ಥಳೀಯರು, ನಮ್ಮೂರ ರಸ್ತೆ, ಪರಿಸರ ಹಾಳಾಗುತ್ತದೆ ಎಂದು ಆಗ್ರಹಿಸಿ

ಬಂಟ್ವಾಳ: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ

ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು. ಬಿ.ಸಿ.ರೋಡಿನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶನಿವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ ಆರಂಭಗೊಂಡಿದ್ದು, ಗಣಯಾಗದ ಪೂರ್ಣಾಹುತಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಪ್ರಕೃತಿಯೇ ದೇವರು” ಶ್ರೀ ಸೂರ್ಯನಾರಾಯಣ ಭಟ್ ಸಂದೇಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಜಯರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿಯ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ನಾಲ್ಕನೇ ದಿನವಾದ ಫೆಬ್ರವರಿ 25, 2023 ರ ಶನಿವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ

ಶಿವಪಾಡಿಯಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಹುಟ್ಟುಹಬ್ಬ ಆಚರಣೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24, 2023 ರ ಶುಕ್ರವಾರದಂದು ತಮ್ಮ ಹುಟ್ಟುಹಬ್ಬವನ್ನು ಯಾಗದ ಚಪ್ಪರದಲ್ಲೇ ನಗರಸಭೆಯ ಪೌರ ಕಾರ್ಮಿಕರೊಂದಿಗೆ ಕೂಡಿ ದೀಪವನ್ನು ಬೆಳಗಿಸುವ

ಪಡುಬಿದ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ : ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ

ಗೃಹಿಣಿಯೊರ್ವರು ತನ್ನ ವಾಸದ ಮನೆಯ ಅಡುಗೆ ಕೋಣೆಯಲ್ಲಿ ಶಾಲಿನಿಂದ ನೇಣು ಹಾಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನ್ಯಾಯಾಲಯ ಆರೋಪಿ ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆತ್ಮಹತ್ಯೆಗೆ ಶರಣಾದ ಗೃಹಿಣಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಚೇತನ್ ಎಂಬಾತನ ಪತ್ನಿ ಮಮತ(43), ಎಂಟು ವರ್ಷದ ಒಂದು ಹೆಣ್ಣು ಮಗು ಹಾಗೂ ಹನ್ನೆರಡು ವರ್ಷದ ಗಂಡು ಮಗನನ್ನು

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ

ಮಂಗಳೂರು : ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್

ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳನ್ನು

ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರಿಗೆ 74ನೇ ಹುಟ್ಟುಹಬ್ಬದ ಸಂಭ್ರಮ

ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ