ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ
Month: December 2023
ಉಡುಪಿ ಬನ್ನಂಜೆಯ ನಾರಾಯಣ ಗುರು ಭವನದ ಕೆ. ತೋಮ ಶ್ಯಾನುಭೋಗ ವೇದಿಕೆಯಲ್ಲಿ ನಡೆದ ಬನ್ನಂಜೆ ಬಾಬು ಅಮೀನ್ ಅವರಿಗೆ ೮೦ರ ಪ್ರಾಯದ ಅಭಿನಂದನಾ ಸಮಾರಂಭ ನಡೆಯಿತು. ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಅವರು ಬಾಬು ಅಮೀನರನ್ನು ಜಾನಪದ ಅಧ್ಯಯನ ವೀರ ಎಂದು ಬಣ್ಣಿಸಿದರು. ಬನ್ನಂಜೆಯವರ ಜಾನಪದ ಬರಹ ಸಂಪತ್ತು ಬೆಲೆ ಕಟ್ಟಲಾಗದ್ದು ಎಂದು ಅವರು ಕೊನೆಯಲ್ಲಿ ನಡೆದ ಅಭಿನಂದನಾ
ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9ಸಾವಿರ
ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ
ನೆಲ್ಯಾಡಿ: ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ನಿಂತಿದ್ದ ಬಸ್‌ನ ಹಿಂಬದಿಗೆ ಗುದ್ದಿದ ಘಟನೆ ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ ಸಂಭವಿಸಿದೆ. ಬೆಳಗಿನ ಜಾವವಾದ ಕಾರಣ ಬಸ್ಸು ನಿಂತಿದ್ದು, ಕಾರು ಚಾಲಕನ ಗಮನಕ್ಕೆ ಬಾರದೆ ಇದ್ದುದರಿಂದ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರಿನ ಬನಶಂಕರಿ ಲೇ ಔಟ್‌ನ ಮಹೇಶ್ (28) ,ಅಭಿಷೇಕ್ (30 ),
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ
ಮಂಗಳೂರು ಮಹಾನಗರ ಪಾಲಿಕೆ, ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ, ಮನವಿ ಪತ್ರ, ಲಾಂಛನ, ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಬೆಂಗ್ರೆಯ ಫೆರಿ ಪಾಯಿಂಟ್‌ನಲ್ಲಿ ನಡೆಯಿತು. ಮೀನುಗಾರಿಕಾ ಇಲಾಖೆಯ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ
ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ “ಭಾವ ಲಹರಿ” ಸಂಗೀತ ಕಾರ್ಯಕ್ರಮವು ಪುತ್ತಿಗೆ ವಿವೇಕಾನಂದ ನಗರದ ಬಯಲು ರಂಗಮಂದಿರದಲ್ಲಿ ಸೇರಿದ ಸಂಗೀತ ರಸಿಕರ ಹೃದಯ ಗೆದ್ದಿತು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಚೌತಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಸುಮಾರು 95ಭಕ್ತರು




























