Home 2024

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ

ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಜೋರ್ಜಿಯನ್ ಪುರಸ್ಕಾರ

ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಏಳು ದಿನಗಳ ವಾರ್ಷಿಕ ಹಬ್ಬದಂದು ಪ್ರತಿ ವರ್ಷ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ಮಾಡಿದವರಿಗೆ ಕೊಡ ಮಾಡುವ ಜೋರ್ಜಿಯನ್ ಪುರಸ್ಕಾರವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಪ್ರಧಾನ ಮಾಡಲಾಯಿತು. ಚರ್ಚ್ ನ ಧರ್ಮಗುರು

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು

ಮಂಜೇಶ್ವರ : ರಾ.ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ – ಮೂವರ ದಾರುಣ ಅಂತ್ಯ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ

ಹಾಸನ : ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು

ಬಂಟ್ವಾಳ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ

ವಿಶ್ವ ಅಸ್ತಮಾ ದಿನ – ಮೇ 7

ಪ್ರತಿ ವರ್ಷ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ಎಂದು ಆಚರಿಸಲಾಗುತ್ತಿದೆ. ವಿಶ್ವದಾದ್ಯಂತ ಅಸ್ತಮಾ ರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸಿ, ರೋಗದ ಬಗ್ಗೆ ಜಾಗೃತಿ ಮೂಡಿಸಿ, ರೋಗಿಗಳಿಗೆ ಆತ್ಮಸೈರ್ಯವನ್ನು ನೀಡುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ಮುಖ್ಯವಾಗಿ