ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ
Month: January 2024
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ. ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ
ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು
ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು
ಎಕ್ಸ್ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್ ಪೊಸ್ಯಾಟ್’
ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ‘ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ. ಹೊಸ ಗುರಿ ಮತ್ತು ಉದ್ದೇಶಗಳೊಂದಿಗೆ ಮುನ್ನಡೆಯಲು ಹೊಸವರ್ಷ ಬರುತ್ತಿದೆ’ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ. ‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಸಮೃದ್ಧಿ,
ಮಂಗಳೂರಿನ ನವಭಾರತ್ ವೃತ್ತದಲ್ಲಿರುವ ಬ್ರಹ್ಮ ಸಮಾಜ ಕಾಂಪ್ಲೆಕ್ಸ್‌ನಲ್ಲಿ ಡಿಜಿಟಲ್ ಪ್ಲಾನೆಟ್‌ನವರ ಹೈಯರ್ ಎಕ್ಸ್ ಕ್ಲೂಸಿವ್ ಸ್ಟೋರ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಶ್ವದ ನಂಬರ್ ವನ್ ಹೋಮ್ ಅಪ್ಲೈಯನ್ಸಸ್ ಹಾಗೂ ಭಾರತದ ಮೂರನೇ ಅತೀ ದೊಡ್ಡ ಬ್ರ್ಯಾಂಡ್ ಆಗಿರುವ ಹೈಯರ್‌ನ ಎಕ್ಸ್‌ಕ್ಲೂಸಿವ್ ಸ್ಟೋರ್ ಮಂಗಳೂರಿನಲ್ಲಿ ಶುಭಾರಂಭಗೊಂಡಿತು. ನೂತನ ಹೈಯರ್‌ನ
ಪೀಠೋಪಕರಣ ಉದ್ಯಮದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ತಮಾಮ್ ಫರ್ನೀಚರ್ ವರ್ಲ್ಡ್ ನೂತನ ಶೋರೂಂ ನಗರದ ಪಂಪ್‌ವೆಲ್‌ನ ಬಳಿ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಉದ್ಘಾಟನೆಗೊಂಡಿತು. ಹಿಂದುಸ್ತಾನ್ ಬಾವಾ ಬಿಲ್ಡರ್ಸ್‌ನ ಆಡಳಿತ ನಿರ್ದೇಶಕರಾದ ಬಾವಾ ಅಬ್ದುಲ್ ಖಾದರ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಮಂಜೇಶ್ವರ ಶಾಸಕರಾದ ಎ.ಕೆ.ಎಂ ಅಶ್ರಫ್ ಅವರು ಮಾತನಾಡಿ,
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು 5 ಲಕ್ಷ ರೂ.ನೆರವಿನ ಮೊತ್ತದ ಚೆಕ್ ಅನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿಗೆ




























