Home 2024 October

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ದೀಪವನ್ನ ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಬ್ಬಂದಿ ವರ್ಗದವರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಕನ್ನಡ ಮಾಧ್ಯಮ

ಮುಂಬೈ: ತುಳುವರ ಮನಗೆದ್ದ ಗಮ್ಮತ್ ಕಲಾವಿದರ್ ಯುಎಇ ಹವ್ಯಾಸಿ ಕಲಾವಿದರ ತಂಡ ಪ್ರದರ್ಶಿಸಿದ “ವಾ ಗಳಿಗೆಡ್ ಪುಟುದನಾ” ನಾಟಕ

ಕೊಲ್ಲಿ ರಾಷ್ಟ್ರದ ತುಳು ರಂಗ ಭೂಮಿಯಲ್ಲಿ ಚೊಚ್ಚಲ ಪ್ರದರ್ಶನದಲ್ಲೇ ಜನಮನ‌ಸೂರೆಗೊಂಡ ಗಮ್ಮತ್ ಕಲಾವಿದರ “ವಾ ಗಳಿಗೆಡ್ ಪುಟುದನಾ” ತುಳು ಸಾಂಸಾರಿಕ ಹಾಸ್ಯಮಯ ನಾಟಕ – ಮುಂಬೈ ಮಹಾನಗರದಲ್ಲಿ ಭಾನುವಾರ 27 ಅಕ್ಟೋಬರ್ 2024 ರಂದು ತಮ್ಮ ದ್ವಿತೀಯ ಪ್ರದರ್ಶನದೊಂದಿಗೆ ಅಭೂತಪೂರ್ವ ಯಶಸ್ವಿ ದಾಖಲೆಗಳೊಂದಿಗೆ ಮುಂಬೈ ತುಳುವರ ಮನಗೆದ್ದು ಹೊಸ ಭಾಷ್ಯ

ಅಸೈಗೋಳಿ: ರಿಕ್ಷಾ ಚಾಲಕ ಆತ್ಮಹತ್ಯೆ

ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ

ಉಪ್ಪಿನಂಗಡಿ: ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ನಿಧನ

ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ. ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ

ಮಂಗಳೂರು : ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಪ್ರಭಾಕರ ಜೋಶಿ ಅವರು ಹೇಳಿದರು.ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು

ಪುತ್ತೂರು : ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿದ ಪತ್ನಿ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ  ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ

ಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು

ವಿಧಾನಪರಿಷತ್ ಚುನಾವಣೆ: 1600 ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ‌ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ- 11ರ ಹರೆಯದ ವಿದ್ಯಾರ್ಥಿನಿ ಸಾವು

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ