Home 2024 November (Page 4)

ಬೈಂದೂರು : 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಸಮಾರಂಭ ನಾಗೂರು ನಲ್ಲಿ ನೆಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ

ಬೈಂದೂರು: ಸರ್ಕಾರದ ಧಮನಕಾರಿ‌ ನೀತಿ ಖಂಡನೀಯ – ಡಾ. ಅತುಲ್ ಕುಮಾರ್ ಶೆಟ್ಟಿ

ಬೈಂದೂರು: ಕಸ್ತೂರಿ ರಂಗನ್ ವರದಿ‌ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ‌ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ

ಉಳ್ಳಾಲ: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ

ಪ್ರತಿಭಾ ಕಾರಂಜಿ: ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅವರು ಕಥೆ ಹೇಳುವ ವಿಭಾಗದಲ್ಲಿ ಗಮನ ಸೆಳೆದಿದ್ದು, ಅವರ ಸಾಧನೆಯನ್ನು ಪರಿಗಣಿಸಿ

ಕಾಪು: ಹಿಟ್ & ರನ್: ಬೈಕ್ ಸವಾರ ಮೃತ್ಯು

ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ

ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆಯ ಉಪನಿರ್ದೇಶಕ ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ ೫ ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು

ಮಂಗಳೂರು ವಿ ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ ಆಳ್ವಾಸ್‌ ಗೆ ಸತತ 14 ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ:ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ

ಕಾರ್ಕಳ : ಪತಿಯ ಸಾವಿನಿಂದ ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆ‌ಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಘಟನೆಯಲ್ಲಿ ಬದುಕಿಗೆ ಅಂತ್ಯ ಹೇಳಿದವರು. ಮಿಯ್ಯಾರು ಚಚ್ ೯ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ಸಾವು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ