Home 2024 November (Page 5)

ಕಡಬ: ಆರು ವರ್ಷಗಳಿಂದ ವಾಸವಾಗಿದ್ದ ಮನೆ ನೆಲಸಮ-ವೃದ್ಧರು ಅತಂತ್ರ

ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ

ಮಂಜೇಶ್ವರ: ದರೋಡೆಗೆ ಯತ್ನ ಪ್ರಕರಣ: ಪರಾರಿಯಾಗಿದ್ದ ಓರ್ವನ ಸೆರೆ

ಮಂಜೇಶ್ವರ: ಬ್ಯಾಂಕ್ ದರೋಡೆಗೈಯಲು ಹೊಂಚು ಹಾಕಿ ಮಾರಕಾಯುಧಗಳ ಸಹಿತ ಕಾರಿನಲ್ಲಿ ಸಂಚರಿಸುತ್ತಿರುವ ಮಧ್ಯೆ ಊರವರು ಬೆನ್ನಟ್ಟಿ ಹಿಡಿಯುವಾಗ ಪರಾರಿಯಾದ ನಾಲ್ಕು ಮಂದಿ ಆರೋಪಿಗಳ ಪೈಕಿ ಒಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಕಾಸರಗೋಡು ಪರಿಸರವಾಸಿಯಾದ ಈತ ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.2024 ಫೆಬ್ರವರಿ

ಬೈಂದೂರು : ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ

ಬೈಂದೂರು : ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ ಭಾನುವಾರು ನಾಗೂರು ಕೃಷ್ಣ ಲಲಿತಾ ಕಲಾಮಂದಿರದಲ್ಲಿ ನಡೆಯಿತು. ಕಿರಿಮಂಜೇಶ್ವರ ಗ್ರಾ ಪಂ ಅಧ್ಯಕ್ಷ ಶೇಖರ ಖಾರ್ವಿ ಕನ್ನಡ ಹಬ್ಬ 2024ರ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡಿ, ನಮ್ಮ ಭಾಷೆ, ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯ ಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ವ್ಯಕ್ತಿತ್ವ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ

ಬೆಳ್ಳಾರೆ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ ಸುಟ್ಟುಹೋಗಿದೆ. ಪ್ರಿಡ್ಜ್ ಮೇಲಿದ್ದ ಎರಡು ಮೊಬೈಲ್ ಹಾಗೂ ಇನ್ನಿತರ ಹಲವು ವಸ್ತುಗಳು ಸುಟ್ಟುಹೋಗಿವೆ. ನೆರೆಕರೆಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ

ಕಾಪು: ಯುನೈಟೆಡ್ ಟೋಯೊಟ ವತಿಯಿಂದ ಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ

ಕಾಪು ನಲ್ಲಿ ಯುನಿಟೆಡ್ ಟೋಯೊಟ ವತಿಯಿಂದಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ ಇಂದು ಸಂಭ್ರಮದಲ್ಲಿ ಶುಭ ಆರಂಭಗೊಂಡಿದೆ. ಕಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಿತಾ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾರ್ಕೆಟಿಂಗ್ ಮೆನೇಜರ್ ಸೋನಿಯಾ ಮೇಡಂ ಅವರು

ಭರದಿಂದ ಸಾಗುತ್ತಿದೆ “90 ಎಮ್ ಎಲ್” ಚಿತ್ರೀಕರಣ

ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ

ವಿಟ್ಲ: 94 ಹಕ್ಕು ಪತ್ರ ವಿಚಾರ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ ನಡೆಸಿದ ವ್ಯಕ್ತಿಗಳು

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ