ಬೆಳ್ತಂಗಡಿ ಕಳವು ಪ್ರಕರಣ : ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ.
ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿದ ಪೊಲೀಸ್ ಅಧೀಕ್ಷಕರಾದ ರಿಷ್ವತ್ ಸಿಂಘ್ ಅವರು, ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 104 ಗ್ರಾಂ ಚಿನ್ನಾಭರಣಗಳನ್ನು, 288 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹಾಗೂ 25,000 ರೂ. ನಗದು ಹಾಗು ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

2020 ಜೂನ್ 6ರಂದು ಕಲ್ಮಂಜ ಗ್ರಾಮದ ನಿವಾಸಿಯಾಗಿರುವ ಅಚ್ಯುತ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆ ಕೋರರು ಮನೆಯಲ್ಲಿದ್ದ ಅಚ್ಯುತ ಭಟ್ ಅವರನ್ನು ಹಾಗು ಅವರ ತಾಯಿ, ತಮ್ಮನ ಪತ್ನಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ಚಿನ್ನ ಹಗೂ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ದರೋಡೆ ಮಾಡಿ ಪರಾರಿಯಾಗುದ್ದರು.ಆರೋಪಿಗಳು ಸುಮಾರು 30ರಿಂದ 35 ಪವನ್ ಚಿನ್ನಾಭರಣಗಳನ್ನು ಒಂದು ಕೆ.ಜಿ ಬೆಳ್ಳಿಯ ಆಭರಣಗಳನ್ನು ದರೋಡೆ ಮಾಡಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಪತ್ತೆ ಬಗ್ಗೆ ಸಿ.ಬಿ. ರಿಶ್ಯಂತ್ ಪೋಲಿಸ್ ಅದೀಕ್ಷಕರು ,ದ.ಕ ಜಿಲ್ಲೆ, ಮಾನ್ಯ ಹೆಚ್ಚುವರಿ ಪೋಲಿಸ್ ಅದೀಕ್ಷಕರುಗಳಾದ ಎಂ ಜಗದೀಶ್ ಮತ್ತು ರಾಜೇಂದ್ರ ಡಿ ಎಸ್ ಮತ್ತು ಪೋಲಿಸ್ ಉಪಾಧೀಕ್ಷಕರು ಬಂಟ್ವಾಳ ವಿಜಯ ಪ್ರಸಾದ್ ಎಸ್ ರವರ ನಿರ್ದೆಶನದಂತೆ, ವಸಂತ್ ಆರ್ ಆಚಾರ್ ಪೋಲಿಸ್ ವೃತ್ತ ನಿರೀಕ್ಷಕರು ಬೆಳ್ತಂಗಡಿ ಗ್ರಾಮಾಂತರ ವೃತ್ತ ರವರ ಮಾರ್ಗದ± ಪತ್ತೆ ಕಾರ್ಯಕ್ಕೆ ಸಹಕರಿಸಿರುತ್ತಾರೆ.
