HomeFresh Newsಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments