ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.