ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆ

ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಿದರು.



ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟೆಹೊಳೆ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
