ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ ಪೇರಾಲು, ಕೆವಿಜಿ ಆಯುರ್ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ ಕೆ. ಜಿ., ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ ಎಂ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಸನತ್ ಕುಮಾರ್ ಡಿ ಜೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರದ್ವಾಜ್ ಬಿ ಹಾಗೂ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಕಾ ವೈದ್ಯರುಗಳು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು


















